ಬ್ರೇಕಿಂಗ್ ನ್ಯೂಸ್
07-03-22 04:38 pm Mangalore Correspondent ಕರಾವಳಿ
ಉಳ್ಳಾಲ, ಮಾ.7: ಪುರಾಣ ಪ್ರಸಿದ್ಧ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೂತನ ಬ್ರಹ್ಮರಥವನ್ನ ಭಾನುವಾರ ಸಮರ್ಪಿಸಲಾಯಿತು. ಬ್ರಹ್ಮರಥ ನಿರ್ಮಾಣ ಸಮಿತಿ ಅಧ್ಯಕ್ಷ ರಾಮಮನೋಹರ ರೈ ಅವರನ್ನು ಬ್ರಹ್ಮರಥ ನಿರ್ಮಾಣ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ತಲಪಾಡಿ ರಾಮಮನೋಹರ್ ರೈ ಅವರ ಸಾರಥ್ಯದಲ್ಲಿ ಕೋಟೆಕಾರು -ಬೀರಿ ಗಣೇಶ ಮಂದಿರದಿಂದ ಹೊರಟ ಶೋಭಾಯಾತ್ರೆಗೆ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ದೈವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ತಲಪಾಡಿ ದೊಡ್ಡಮನೆ ಡಾ. ಜಯಪಾಲ ಶೆಟ್ಟಿ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ದುರ್ಗಾಪರಮೇಶ್ವರೀ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ಸಂದಿದೆ. ಐನೂರು ವರ್ಷಗಳ ಹಿಂದಿನ ರಥ ಶಿಥಿಲಗೊಂಡಿದ್ದರಿಂದ ನೂತನ ಬ್ರಹ್ಮರಥ ನಿರ್ಮಾಣ ಕಾರ್ಯ ಅಯೋಧ್ಯೆಯ ರಥ ನಿರ್ಮಾಣ ಜವಾಬ್ದಾರಿ ಹೊತ್ತ ಕೋಟೇಶ್ವರದ ಖ್ಯಾತ ಶಿಲ್ಪಿಯಿಂದ ನಿರ್ಮಾಣಗೊಂಡು ಕ್ಷೇತ್ರದ ವಾರ್ಷಿಕ ಉತ್ಸವ ಸಂದರ್ಭದಲ್ಲೇ ಸಮರ್ಪಣೆಯಾಗುತ್ತಿರುವುದು ಸಂತಸದ ವಿಚಾರ ಎಂದರು.


ಕೋಟೆಕಾರು, ಬೀರಿ, ಕೆ.ಸಿ. ರೋಡ್, ತಲಪಾಡಿ, ತಚ್ಚಾಣಿ ಮಾರ್ಗವಾಗಿ ಬ್ರಹ್ಮರಥವು ಶ್ರೀ ಕ್ಷೇತ್ರಕ್ಕೆ ಸಮರ್ಪಣೆಗೊಂಡಿತು. ಕ್ಷೇತ್ರದಲ್ಲಿ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ರಪ್ರಸನ್ನ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿದರು. ದೇವರು ನಮ್ಮ ಬದುಕಿನಲ್ಲಿ ಏನೆಲ್ಲಾ ಕೊಟ್ಟಿದ್ದಾನೆಯೋ ಅದೆಲ್ಲವೂ ದೇವತಾನುಗ್ರಹವಾಗಿದ್ದು ನಮಗೆ ಸಿಕ್ಕಿದ್ದನ್ನು ನಾವು ಬಳಸುವುದಕ್ಕಿಂತ ಮುಂಚಿತವಾಗಿ ಕಿಂಚಿತ್ತಾದರೂದೇವರಿಗೆ ಸಮರ್ಪಿಸಬೇಕು. ಆ ನಿಟ್ಟಿನಲ್ಲಿ ಬ್ರಹ್ಮರಥ ನಿರ್ಮಾಣ ಸಮಿತಿ ಹಾಗೂ ಶ್ರೀ ದೇವಿಯ ಭಕ್ತರಿಂದ ತಲಪಾಡಿ ಶ್ರೀ ಮಾತೆಗೆ ನೂತನ ಬ್ರಹ್ಮರಥದ ಮೂಲಕ ಕ್ಷೇತ್ರಕ್ಕೆ ದೊಡ್ಡ ಕಾಣಿಕೆ ಸಮರ್ಪಣೆ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಬ್ರಹ್ಮರಥ ನಿರ್ಮಾಣ ಸಮಿತಿ ಅಧ್ಯಕ್ಷ ರಾಮ್ ಮನೋಹರ್ ರೈ "ರೈ ಮಹಲ್" ತಲಪಾಡಿ ಅವರನ್ನು ಬ್ರಹ್ಮರಥ ನಿರ್ಮಾಣ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ಶ್ರೀ ಗಣೇಶ್ ಭಟ್ ಪಂಜಾಳ ಹಾಗೂ ಉದ್ಯಮಿ ಪ್ರಭಾಕರ್ ಶೆಟ್ಟಿ ಕಿನ್ಯ ಗುತ್ತು ಅವರನ್ನು ಗೌರವಿಸಲಾಯಿತು. ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರು ರುದ್ರಾಕ್ಷಿ ಮರದ ಗಿಡವನ್ನು ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದರು.


ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನ್ಯಾಯವಾದಿ ಬಿ. ರವೀಂದ್ರನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾರಕೂರು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ, ವಿಶ್ವ ಹಿಂದು ಪರಿಷತ್ ಕರ್ನಾಟಕ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್, ಮಾಜಿ ಶಾಸಕಿ ಕೆ. ಶಕುಂತಲಾ ಶೆಟ್ಟಿ, ಮುಂಬೈಯ ಉದ್ಯಮಿ ಭಾಸ್ಕರ ಶೆಟ್ಟಿ ಹೊಸಮನೆ ನಾರ್ಲ ತಲಪಾಡಿ, ಕ್ಷೇತ್ರದ ಆಡಳಿತಾಧಿಕಾರಿ ಪ್ರವೀಣ್ ಕೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮೋಹನ್ ದಾಸ್ ಶೆಟ್ಟಿ ನೆತ್ತಿಲಬಾಳಿಕೆ, ಗೋಪಾಲಕೃಷ್ಣ ಮೇಲಾಂಟ, ಬ್ರಹ್ಮರಥ ನಿರ್ಮಾಣ ಸಮಿತಿ ಕಾರ್ಯದರ್ಶಿ ವಸಂತ ದೇವಾಡಿಗ, ಕೋಶಾಧಿಕಾರಿ ಪ್ರದೀಪ್ ಕಿಲ್ಲೆ ಮೇಗಿನ ಪಂಜಾಳಗುತ್ತು, ಪ್ರಚಾರ ಸಮಿತಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಮೊದಲಾದವರು ಉಪಸ್ಥಿತರಿದ್ದರು.
Mangalore Talapady Bhramaratha held with grandeur, thousands gather.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm