ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್‌ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್‌ಹೌಸ್‌ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm