ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.



ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm