ಬ್ರೇಕಿಂಗ್ ನ್ಯೂಸ್
12-04-22 10:25 pm Mangalore Correspondent ಕರಾವಳಿ
ಮಂಗಳೂರು, ಎ.12: ವರ್ಷದ ಮೊದಲೇ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆ ನಡೆಸುತ್ತಿದೆ. ಏಕಕಾಲದಲ್ಲಿ ಮಂಗಳೂರು, ಬೆಳಗಾವಿ, ಮೈಸೂರಿನಲ್ಲಿ ಸಭೆ ನಡೆಸಲಾಗಿದ್ದು 2023ರ ಚುನಾವಣೆಯಲ್ಲಿ ಸ್ವಂತ ಶಕ್ತಿಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದರ ಜೊತೆಗೆ ರಾಜ್ಯದಾದ್ಯಂತ ಏ.11ರಿಂದಲೇ ಮೂರು ತಂಡಗಳ ಮೂಲಕ ರಾಜ್ಯ ನಾಯಕರು ಪ್ರವಾಸ ಹಮ್ಮಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡವು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಪಕ್ಷದ ಪ್ರಮುಖರನ್ನು ಸೇರಿಸಿ ಚರ್ಚೆ ನಡೆಸಿದೆ. ಸದ್ಯದ ಬೆಳವಣಿಗೆ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಹೇಗಿದೆ, ಕ್ಷೇತ್ರವಾರು ಶಾಸಕರ ಬಗೆಗೆ ಜನರ ಪ್ರತಿಕ್ರಿಯೆ, ಹಿಜಾಬ್ ವಿವಾದ ಮತ್ತು ಆನಂತರದ ಬೆಳವಣಿಗೆಯಿಂದ ಪಕ್ಷಕ್ಕೆ ಆಗಿರುವ ಹಿನ್ನಡೆ ಮತ್ತು ಲಾಭಗಳೇನು ಎನ್ನುವ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ.
ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದ್ದು ಅದರ ನಡುವಲ್ಲೇ ಪಕ್ಷದ ಪ್ರಮುಖರನ್ನು ಕರೆಸಿ ನಾಯಕರು ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ 150 ಪ್ಲಸ್ ಸ್ಥಾನಗಳನ್ನು ಗೆಲ್ಲಬೇಕೆಂಬ ಅಮಿತ್ ಷಾ ಸೂಚನೆ ಹಿನ್ನೆಲೆಯಲ್ಲಿ ಏನೇನು ಕಾರ್ಯ ಆಗಬೇಕು, ಹಿಂದುತ್ವ ಮತ್ತು ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಗಳಿಸುವ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರ ಜೊತೆಗೆ ಮುಸ್ಲಿಮ್ ವ್ಯಾಪಾರಸ್ಥರ ನಿಷೇಧ ಪ್ರಕ್ರಿಯೆಯಿಂದಾಗಿ ಕರಾವಳಿಯಲ್ಲಿ ಮತ ಕಳಕೊಳ್ಳುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಆ ರೀತಿಯ ಸನ್ನಿವೇಶವನ್ನು ಸಮತೋಲಿತವಾಗಿ ನೋಡಿಕೊಂಡು ಅಂತಹ ಪ್ರಕ್ರಿಯೆಗಳಿಗೆ ಹೆಚ್ಚು ಮಹತ್ವ ನೀಡದಂತೆ ನಾಯಕರು ಸೂಚನೆ ನೀಡಿದ್ದಾರೆ.
ಮಂಗಳೂರಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಸಂಸದ ಸದಾನಂದ ಗೌಡ, ಸಚಿವರಾದ ಅಶ್ವತ್ಥ ನಾರಾಯಣ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶ್ರೀರಾಮುಲು, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ಮೂರು ಜಿಲ್ಲೆಗಳ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
The BJP, which has begun assembly polls earlier in the year, is holding a meeting with division-level leaders. The meeting was held simultaneously in Mangalore, Belgaum and Mysore and led by CM Basavaraja Bommai and Arun Singh to win the BJP in their own power in the 2023 elections. In addition, the state leaders have toured the country through three teams since the A11.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm