ಬ್ರೇಕಿಂಗ್ ನ್ಯೂಸ್
16-04-22 07:49 pm Mangalore Correspondent ಕರಾವಳಿ
ಮಂಗಳೂರು, ಎ.16: ಹಿಂದಿನವರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಎಂದು ಸಮರ್ಥಿಸಲು ಇವರೇನು ವ್ಯಾಪಾರ ಮಾಡುತ್ತಿದ್ದಾರೆಯೇ.. ಹಿಂದಿನವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಇವರೀಗ ಸರಕಾರ ನಡೆಸುತ್ತಿದ್ದಾರೆ. ಹಿಂದಿನದ್ದೆಲ್ಲವನ್ನೂ ತನಿಖೆ ನಡೆಸಲಿ, ಯಡಿಯೂರಪ್ಪ ಕಾಲದಲ್ಲಿ ಏನಾಗಿದೆ, ಎಸ್ಸೆಂ ಕೃಷ್ಣ ಕಾಲದಲ್ಲಿ ಏನೆಲ್ಲಾ ಆಗಿತ್ತು ಎಲ್ಲವೂ ತನಿಖೆ ಆಗಲಿ. ಅದಕ್ಕೊಂದು ಆಯೋಗ ರಚಿಸಲಿ. ನಾವು ಕೇಳ್ತಾ ಇರೋದು, ಈಗ ಆಗ್ತಿರೋ ಭ್ರಷ್ಟಾಚಾರದ ಬಗ್ಗೆ. ಹಳೆಯದನ್ನು ಹೇಳಿಕೊಂಡು ಸಮರ್ಥನೆ ಮಾಡೋದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರಲ್ಲ ಎಂದು ಮಾಜಿ ಡಿಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ್, ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪ್ರತೀ ಬಾರಿಯೂ ಸಿದ್ದರಾಮಯ್ಯ ಕಾಲದಲ್ಲಿ ಮಾಡಿಲ್ಲವೇ ಎಂದು ಮರು ಪ್ರಶ್ನೆ ಹಾಕುತ್ತಾರೆ. ಹಿಂದಿನ ಸರಕಾರದಲ್ಲಿ ತಪ್ಪು ಆಗಿದ್ದರೆ ಇವರು ತನಿಖೆ ಮಾಡಿಸಲಿ. ಯಾರು ಬೇಡ ಎಂದಿದ್ದು. ಇವರು ಹಳೆಯದನ್ನು ಹೇಳಿ ಈಗಿನದ್ದನ್ನು ಮರೆ ಮಾಚಲು ಸಾಧ್ಯವಾಗಲ್ಲ. ಈಶ್ವರಪ್ಪ ಮತ್ತು ಬಿಜೆಪಿ ಸರಕಾರದ ವಿರುದ್ಧ ನಲ್ವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿರುವ ಬಗ್ಗೆ ಒಂದು ವರ್ಷದ ಹಿಂದೆಯೇ ಗುತ್ತಿಗೆದಾರರ ಸಂಘದ ಕೃಷ್ಣಪ್ಪ ಎಂಬವರು ಪ್ರಧಾನಿಗೆ ದೂರು ನೀಡಿದ್ದರು. ಯಾಕೆ ಪ್ರಧಾನಿ ಮೋದಿ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

ಗುತ್ತಿಗೆದಾರರ ಸಂಘದ ಕೆಂಪಣ್ಣ ಸರಣಿಯಾಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಮಗಾರಿ ನಿಲ್ಲಿಸುವ ಬೆದರಿಕೆ ಹಾಕಿದ್ದಾರೆ. ಇಂಥ ಭ್ರಷ್ಟರು ಸರಕಾರ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ದಾಖಲೆ ಬೇಕೆ ಎಂದು ಹೇಳಿದ ಪರಮೇಶ್ವರ್, ಕುಮಾರಸ್ವಾಮಿಯವರು ಯಾವ ಆಧಾರದಲ್ಲಿ ಸಮರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಈಶ್ವರಪ್ಪ ವಿರುದ್ಧದ ಭ್ರಷ್ಚಾಚಾರವನ್ನು ಸಮರ್ಥನೆ ಮಾಡೋದಾದ್ರೆ ಇವರಿಗೆ ಸಾರ್ವಜನಿಕ ಜೀವನದಲ್ಲಿರುವ ನೈತಿಕತೆ ಇಲ್ಲ. ಅವರು ಸಮರ್ಥನೆ ಮಾಡಿಕೊಂಡು ಹೋಗಲಿ. ನಾವು ಗುತ್ತಿಗೆದಾರನಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡುತ್ತೇವೆ. ಈಶ್ವರಪ್ಪ ಬಂಧಿಸದೆ ನಾವು ಹೋರಾಟ ನಿಲ್ಲಿಸಲ್ಲ ಎಂದು ಹೇಳಿದರು.
The district Congress staged protest here at Clock Tower on Saturday April 16 against minister K S Eshwarappa in connection to contractor Santhosh Patil suicide case.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm