ಬ್ರೇಕಿಂಗ್ ನ್ಯೂಸ್
01-05-22 09:42 pm Udupi Correspondent ಕರಾವಳಿ
ಉಡುಪಿ, ಮೇ 1: ಪೊಲೀಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಇದಕ್ಕೂ ಮುನ್ನ ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆದಿದ್ದು ತನಿಖೆಯ ಜಾಡನ್ನು ಅತ್ತ ತಿರುಗಿಸಿದೆ.
ಆದಿ ಉಡುಪಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಡಿಎಆರ್ ಸಿಬಂದಿ ರಾಜೇಶ್ ಕುಂದರ್ ಎಪ್ರಿಲ್ 28 ರಂದು ಬೆಳಗ್ಗೆ ತನ್ನ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ನಡುವೆ ನಡೆದ ಗಲಾಟೆ ವಿಚಾರದಲ್ಲಿ ರಾಜೇಶ್ ಕುಂದರ್ ಅವರನ್ನು ಅಮಾನತು ಮಾಡಲಾಗಿತ್ತು. ಮೊನ್ನೆ ಎ.27 ರಂದು ಅಮಾನತು ಅವಧಿ ಪೂರೈಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಅಮಾನತು ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದರು. ಅದೇ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಡೆತ್ ನೋಟ್ ನಲ್ಲಿರುವ ಮಾಹಿತಿಗಳು ಪ್ರಕರಣದ ತನಿಖೆಗೆ ದಿಕ್ಕು ತೋರಿದೆ. ಡೆತ್ ನೋಟ್ ನಲ್ಲಿ ಡಿಎಆರ್ ಎಸಿಪಿ ಉಮೇಶ್, ಅಶ್ಫಾಕ್ ಹಾಗೂ ಗಂಗೊಳ್ಳಿ ಠಾಣೆ ಪಿಎಸ್‌ಐ ನಂಜ ನಾಯ್ಕ ಹಾಗೂ ಇನ್ನೋರ್ವ ವ್ಯಕ್ತಿ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮೂವರು ಪೊಲೀಸರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಭದ್ರತೆ ; ಕರ್ತವ್ಯದಲ್ಲಿದ್ದಾಗಲೇ ತಲೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಸಿಬಂದಿ ಆತ್ಮಹತ್ಯೆ
The alleged suicide case of head constable Rajesh Kundar has taken a new twist due with the death note found. In the death note, the deceased has accused an ACP, PSI and two others of abetting his extreme step.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm