ಬ್ರೇಕಿಂಗ್ ನ್ಯೂಸ್
02-05-22 08:13 pm Mangalore Correspondent ಕರಾವಳಿ
ಮಂಗಳೂರು, ಮೇ 2: ಬಿಜೆಪಿಯವರು ಅಭಿವೃದ್ಧಿ ವಿಚಾರವನ್ನು ಬದಿಗಿಟ್ಟು ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಧರ್ಮದ ಹೆಸರಲ್ಲಿ ಮತಗಳನ್ನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಇದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗಬಹುದು. ಜನಸಾಮಾನ್ಯರ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆ, ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿಚಾರಗಳನ್ನು ಮರೆಮಾಚಲು ಧರ್ಮದ ಹೆಸರಲ್ಲಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಕಾರ್ಯದರ್ಶಿ ರಮಾನಾಥ ರೈ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಕಮರ್ಶಿಯಲ್ ಗ್ಯಾಸ್ ಸಿಲಿಂಡರ್ ಸೇರಿದಂತೆ ಪೆಟ್ರೋಲ್, ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೆ, ಅದನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರಕಾರ ವಿಫಲವಾಗಿದೆ. ಆದರೆ ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಧರ್ಮದ ವಿಚಾರಗಳನ್ನು ತೆಗೆದು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಈಗ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ರಾಜ್ಯ ಸರಕಾರಗಳು ಕಾರಣ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಸರಕಾರ ಇದ್ದಾಗ ಬಿಜೆಪಿಯವರು ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಆದರೆ ಮನಮೋಹನ್ ಸಿಂಗ್ ಯಾವತ್ತೂ ಬೆಲೆಯೇರಿಕೆಗೆ ರಾಜ್ಯಗಳು ಕಾರಣ ಎಂದು ಬೆರಳು ತೋರಿಸುವ ಕೆಲಸ ಮಾಡಿರಲಿಲ್ಲ ಎಂದರು.
ರಾಜ್ಯದ ಯಾವುದೇ ಮೂಲೆಯಲ್ಲಿ ಕೋಮು ಗಲಭೆ ಆದರೂ, ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಇವರು ಹೇಳುತ್ತಿದ್ದಾರೆ. ಆದರೆ ಯಾವುದೇ ಕಡೆಯಲ್ಲೂ ಒಬ್ಬನೇ ಒಬ್ಬ ಕಾಂಗ್ರೆಸಿಗನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ. ನಾನು ಈ ಬಗ್ಗೆ ಚಾಲೆಂಜ್ ಮಾಡುತ್ತೇನೆ, ಬಿಜೆಪಿಯವರು ಕಾಂಗ್ರೆಸ್ ಕಾರಣ ಎನ್ನುವ ಆರೋಪದ ಬಗ್ಗೆ ಸಾಬೀತು ಮಾಡಬೇಕು. ಕಾಂಗ್ರೆಸ್ ನಾಯಕನ ಪ್ರಚೋದನಕಾರಿ ಹೇಳಿಕೆಯಿಂದಾಗಿ ಗಲಭೆ ನಡೆದಿದೆ ಎನ್ನುವುದನ್ನು ಸಾಬೀತು ಮಾಡಬೇಕು. ಯಾವುದೇ ಪ್ರದೇಶದಲ್ಲೂ ಗಲಭೆ ನಡೆದಿದ್ದರೆ, ಅದಕ್ಕೆ ಕಾಂಗ್ರೆಸಿಗರು ಪ್ರಚೋದನೆ ಮಾಡಿದ್ದಿಲ್ಲ. ಕಾಂಗ್ರೆಸಿಗರ ಹೇಳಿಕೆಯಿಂದಾಗಿ ಸಮಾಜದಲ್ಲಿ ಸಾಮರಸ್ಯ ಕದಡಿದ ಉದಾಹರಣೆ ಇಲ್ಲ. ಕಾಂಗ್ರೆಸಿಗರು ಸಮಾಜದಲ್ಲಿ ಸಾಮರಸ್ಯ ಬಯಸುತ್ತಾರೆ ವಿನಃ ಶಾಂತಿ ಕದಡುವ ಕೆಲಸ ಮಾಡುವುದಿಲ್ಲ.
ಸಿದ್ದರಾಮಯ್ಯ ಸರಕಾರದಲ್ಲಿ ಜನಸಾಮಾನ್ಯರ ಒಳಿತಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು. ಆದರೆ ಬಿಜೆಪಿ ಸರಕಾರ ಅದನ್ನು ಮುಂದುವರಿಸಿಕೊಂಡು ಬಂದಿಲ್ಲ. ಜನರಿಗಾಗಿ ಬದಲೀ ಯೋಜನೆಗಳನ್ನೂ ಜಾರಿಗೆ ತಂದಿಲ್ಲ. ಧರ್ಮದ ಹೆಸರಲ್ಲಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ಆಮೂಲಕ ವೋಟು ಗಿಟ್ಟಿಸಲು ಯೋಜನೆ ಹಾಕುತ್ತಿದ್ದಾರೆ. ಬಿಜೆಪಿಯವರಿಗೆ ತಾವು ಮಾಡಿದ ಅಭಿವೃದ್ಧಿ, ಆಡಳಿತದ ಬಗ್ಗೆ ಹೇಳಿಕೊಂಡು ಮತ ಪಡೆಯಲು ಸಾಧ್ಯವಾಗಲ್ಲ ಎಂದು ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ರಮಾನಾಥ ರೈ ಟೀಕಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಶಶಿಧರ್ ಹೆಗ್ಡೆ, ನವೀನ್ ಡಿಸೋಜ ಮತ್ತಿತರರು ಇದ್ದರು.
Former MLA Ramanath Rai said, “BJP has a misconception that they will secure votes in the name of religion and not by development. A day will come when BJP will regret.”
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm