ಬ್ರೇಕಿಂಗ್ ನ್ಯೂಸ್
09-05-22 07:21 pm Mangalore Correspondent ಕರಾವಳಿ
ಮಂಗಳೂರು, ಮೇ 9: ಆಜಾನ್ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಬಿಜೆಪಿ ಸರಕಾರ ಅದನ್ನು ಪಾಲಿಸುವಲ್ಲಿ ಸಂಪೂರ್ಣ ಸೋತಿದೆ. ಆಜಾನ್ ಸೇರಿದಂತೆ ಸಾರ್ವಜನಿಕ ಪ್ರದೇಶದಲ್ಲಿ ಬೆಳಗ್ಗೆ 6 ಗಂಟೆ ಮೊದಲು ಧ್ವನಿವರ್ಧಕ ಹಾಕುವಂತಿಲ್ಲ ಎಂದು ಕೋರ್ಟ್ ಆದೇಶ ನೀಡಿದೆ. ಆದರೆ ರಾಜ್ಯದಲ್ಲಿ ಅದನ್ನು ಜಾರಿಗೆ ತರುವಲ್ಲಿ ಸೋತಿದ್ದಾರೆ. ಸರಕಾರವನ್ನು ಎಚ್ಚರಿಸುವ ಸಲುವಾಗಿ ಹಿಂದು ಸಂಘಟನೆಗಳು ಹನುಮಾನ್ ಚಾಲೀಸಾ ಪಠಣ ಆರಂಭಿಸಿದ್ದು ಸರಿಯಾದ ನಡೆ ಎಂದು ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿ ಮಾಧ್ಯಮಕ್ಕೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ರಾಜ್ಯದ ಬಿಜೆಪಿ ಸರಕಾರ ಕಾನೂನು ಪಾಲನೆಯಲ್ಲಿ ಸಂಪೂರ್ಣ ಸೋತಿದೆ, ಕೋರ್ಟ್ ಆದೇಶ ಜಾರಿಗೆ ತರದೇ ಇರುವುದು ಅಕ್ಷಮ್ಯ. ವಿಶೇಷ ಅಂದರೆ, ಇಂತಹ ಸಂದರ್ಭದಲ್ಲಿ ಕಾನೂನು ಜಾರಿಗೆ ತರಲು ಪ್ರತಿಪಕ್ಷಗಳು ಒತ್ತಡ ಹಾಕಬೇಕು. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಸ್ಲಿಮರ ಓಲೈಕೆಗಾಗಿ ಈ ವಿಚಾರದಲ್ಲಿ ದೂರ ನಿಂತಿವೆ ಎಂದನಿಸುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಕೋರ್ಟ್ ಆದೇಶವನ್ನು ಜಾರಿಗೆ ತರಲು ಅಲ್ಲಿನ ಸರಕಾರ ಮುಂದಾಗಿದೆ. ಅಲ್ಲಿನ ಮಸೀದಿಗಳಲ್ಲಿ ಅಳವಡಿಸಿದ್ದ ಅನಧಿಕೃತ 50 ಸಾವಿರ ಲೌಡ್ ಸ್ಪೀಕರ್ ಗಳನ್ನು ತೆರವು ಮಾಡಿದೆ. ಸಿದ್ಧಾಂತ, ತತ್ವ ಪಕ್ಕದಲ್ಲಿಟ್ಟರೂ, ನ್ಯಾಯಾಲಯದ ಆದೇಶ ಪಾಲಿಸುವಂತಾಗಬೇಕು. ಅದಕ್ಕಾಗಿ ಹಿಂದು ಸಂಘಟನೆಗಳು ಸರಕಾರಕ್ಕೆ ಒತ್ತಡ ಹಾಕುವುದಕ್ಕಾಗಿ ಹನುಮಾನ್ ಚಾಲೀಸಾ ಪಠಣಕ್ಕೆ ಇಳಿದಿರುವುದು ಸೂಕ್ತವಾಗಿದೆ. ಇನ್ನಾದರೂ ಸರಕಾರ ಈ ವಿಚಾರದಲ್ಲಿ ಕಠಿಣ ನಿಲುವು ತಳೆದು ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸುವುದರ ಜೊತೆಗೆ ಪರ್ಮಿಶನ್ ಇರುವಲ್ಲಿ ಅದರ ಡೆಸಿಬಲ್ ಕಡಿಮೆಗೊಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಮಂಗಳೂರಿನಲ್ಲಿ ಎಂಡಿಎಫ್ ಸಂಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಕರಾವಳಿಯಲ್ಲಿ ಎಂಡಿಎಫ್ ರೀತಿಯ ಸಂಘಟನೆ ಹೊಸತೇನಲ್ಲ. ಅವರೇನೋ ಮುಸ್ಲಿಮ್ ಮಹಿಳೆಯರಿಗೆ ಫತ್ವಾ ಕೊಡುವ, ಬುರ್ಖಾ ಧರಿಸದೆ ಬರುವ ಮಂದಿಗೆ ದಾಳಿ ಮಾಡುವುದಾಗಿ ಭೀತಿ ಮೂಡಿಸುತ್ತಾರಂತೆ. ಹಿಂದೆ ಮಂಗಳೂರು ಮುಸ್ಲಿಮ್ಸ್ ಪೇಜ್ ಅಂತ ಇತ್ತು. ಇವೆಲ್ಲದರ ಮೂಲ ಉದ್ದೇಶ ಭಯೋತ್ಪಾದನೆ. ಸಮಾಜದಲ್ಲಿ ಭೀತಿ ಸೃಷ್ಟಿಸಲು ಈ ರೀತಿಯ ಕೃತ್ಯ ಮಾಡುತ್ತಿದೆ ಎಂದು ಹೇಳಿದರು.
ಇಂಥ ಬೆಳವಣಿಗೆ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದನ್ನು ತೋರಿಸುತ್ತಿದೆ. ಹೀಗಿದ್ದರೂ, ಕಾಂಗ್ರೆಸ್, ಜೆಡಿಎಸ್ ಇದರ ಬಗ್ಗೆ ಮೌನ ವಹಿಸಿದ್ದು ನೋಡಿದರೆ ಸಮಾಜದ ದಿವಾಳಿತನ ಎದ್ದು ಕಾಣುತ್ತಿದೆ. ಹರ್ಷನ ಹತ್ಯೆ ಬಳಿಕ ಸರಕಾರದ ವೈಫಲ್ಯದ ಬಗ್ಗೆ ನಾವು ಪ್ರಶ್ನೆ ಮಾಡಿದ್ದೇವೆ. ಇವೆಲ್ಲವನ್ನೂ ಸಹಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಸಾಮಾನ್ಯ ಜನ ಸಿಕ್ಕಿಬೀಳುವಂತಾಗಿದೆ ಎಂದು ಹೇಳಿದರು.
Azaan vs Hanuman Chalisa, BJP govt has failed to follow court order slams Chakravarti Sulibele in Mangalore. Addressing press meet here in Mangalore he said why Karnataka BJP govt is unable to follow court orders just like UP govt has been following and that's the reason they are successful in removing speakers from Mosque.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm