ಕರಾವಳಿಯಲ್ಲಿ ಮುಂಗಾರಿನ ಅಭಿಷೇಕ, ಜಿಟಿ ಜಿಟಿ ಮಳೆ ; ದಕ್ಷಿಣ ಕನ್ನಡದಲ್ಲಿ ಶಾಲೆಗೆ ರಜೆ ಘೋಷಿಸಿದ ಜಿಲ್ಲಾಡಳಿತ 

19-05-22 11:06 am       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಾದ್ಯಂತ ಮೇ 19 ರಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ. 

ಮಂಗಳೂರು, ಮೇ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಾದ್ಯಂತ ಮೇ 19 ರಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಮಾಡಿದ್ದಾರೆ. 

ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು ಮುಂಗಾರು ಆರಂಭದ ಸುಳಿವು ನೀಡಿದೆ. ಎರಡು ದಿನಗಳಿಂದ ಇದೇ ಮಾದರಿಯಲ್ಲಿ ಮಳೆಯಾಗುತ್ತಿದ್ದು ಇನ್ನೂ ಎರಡು ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳು ಶಾಲೆಗೆ ತೆರಳುವುದು ಕಷ್ಟವಾಗಿದೆ ಎನ್ನುವ ವರದಿಗಳನ್ನು ಆ ಭಾಗದ ಅಧಿಕಾರಿಗಳು ನೀಡಿದ್ದರಿಂದ ಶಾಲೆಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ‌ಆದರೆ ಜಿಲ್ಲಾಧಿಕಾರಿ ಆದೇಶ ಹೊರಬೀಳುವುದು ಒಂಬತ್ತು ಗಂಟೆ ಆಗಿದ್ದರಿಂದ ನಗರ ಪ್ರದೇಶದಲ್ಲಿ ಹೆಚ್ಚಿನ ಕಡೆ ಮಕ್ಕಳು ಶಾಲೆ ಸೇರಿದ್ದಾರೆ. ಜಿಲ್ಲಾಧಿಕಾರಿ ರಜೆ ಕೊಟ್ಟರೂ, ಮಕ್ಕಳನ್ನು ಮರಳಿ ಕರೆತರುವುದೇ, ಬಿಡುವುದೇ ಅನ್ನುವ ಜಿಜ್ಞಾಸೆಗೆ ಬೀಳುವಂತಾಗಿದೆ. 

ಕರಾವಳಿಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 20ರ ವೇಳೆಗೆ ಮುಂಗಾರು ಪ್ರವೇಶಿಸುವುದು ಖಚಿತವಾಗಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಜಿಟಿ ಜಿಟಿ ಮಳೆ ಶುರುವಾಗಿದೆ. ಈ ರೀತಿಯ ಮಳೆಯಿಂದ ಯಾವುದೇ ಸಮಸ್ಯೆ ಆಗಿಲ್ಲ.

Deputy commissioner (DC) Dr Rajendra K V declared a holiday to schools on Thursday May 19 in Dakshina Kannada Mangalore due to incessant rains. The whole district is being battered by heavy downpour due to the low pressure that is developed in Bay of Bengal. Normal life is thrown out of gear due to the rains that lashed overnight in the district on Wednesday May 18.