Asia Cup 2022 There Are Better Fast Bowlers Than Mohammed Shami In Indian T20 Cricket Says Ricky Ponting.
">ಬ್ರೇಕಿಂಗ್ ನ್ಯೂಸ್
13-08-22 01:24 pm Source: Vijayakarnataka ಕ್ರೀಡೆ
ಹೊಸದಿಲ್ಲಿ: ಭಾರತ ಟಿ20 ತಂಡದಲ್ಲಿ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರಿಗಿಂತ ಅತ್ಯುತ್ತಮ ಬೌಲರ್‌ಗಳಿದ್ದಾರೆಂದು ಹೇಳಿದ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್, ಏಷ್ಯಾ ಕಪ್ ಭಾರತ ತಂಡದಿಂದ ಹಿರಿಯ ವೇಗಿಯನ್ನು ಕೈ ಬಿಟ್ಟಿರುವುದು ಅರ್ಥ ಮಾಡಿಕೊಳ್ಳಬಹುದಾದ ಸಂಗತಿಯಾಗಿದೆ ಎಂದಿದ್ದಾರೆ.
ಆಗಸ್ಟ್ 27 ರಿಂದ ಯುಎಇ ಆತಿಥ್ಯದಲ್ಲಿ ಆರಂಭವಾಗುವ 2022ರ ಏಷ್ಯಾ ಕಪ್ ಟೂರ್ನಿಗೆ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 15 ಸದಸ್ಯರ ಭಾರತ ಟಿ20 ತಂಡವನ್ನು ಪ್ರಕಟಿಸಿತ್ತು. ಅಷ್ಟೇ ಅಲ್ಲದೆ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಟಗಾರರನ್ನಾಗಿ ಆಯ್ಕೆ ಮಾಡಿತ್ತು.
ಪ್ರಸ್ತುತ ಭಾರತ ಟಿ20 ತಂಡದಲ್ಲಿ ಮೊಹಮ್ಮದ್ ಶಮಿ ಅವರಿಗಿಂತ ಅತ್ಯುತ್ತಮ ಬೌಲರ್‌ಗಳಿದ್ದಾರೆ. ಮುಂಬರುವ ಏಷ್ಯಾ ಕಪ್ ಟೂರ್ನಿಯಲ್ಲದೆ, 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಭಾರತ ತಂಡ, ಹೆಚ್ಚಿನ ಸ್ಪಿನ್ನರ್‌ಗಳೊಂದಿಗೆ ಕಣಕ್ಕೆ ಇಳಿಯಲು ಎದುರು ನೋಡುತ್ತಿದೆ ಎಂದು ರಿಕಿ ಪಾಂಟಿಂಗ್ ಐಸಿಸಿ ರಿವ್ಯೂವ್ ಜೊತೆ ಮಾತನಾಡಿದ್ದಾರೆ.
"ದೀರ್ಘಾವಧಿಯಿಂದ ಭಾರತ ತಂಡಕ್ಕೆ ಅತ್ಯುತ್ತಮ ಬೌಲರ್ ಮೊಹಮ್ಮದ್ ಶಮಿ. ಅವರ ಸಾಮರ್ಥ್ಯವನ್ನು ಒಮ್ಮೆ ನೋಡಿದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಪರಿಣಾಮಕಾರಿಯಾಗಿ ಕಾಣುತ್ತಾರೆ. ಆದರೆ, ಪ್ರಸ್ತುತ ಭಾರತ ಟಿ20 ತಂಡದಲ್ಲಿ ಶಮಿಗಿಂತ ಅತ್ಯುತ್ತಮ ಬೌಲರ್‌ಗಳಿದ್ದಾರೆ. ಅದರಂತೆ ಅವರನ್ನು ಏಷ್ಯಾ ಕಪ್‌ಗೆ ಕಡೆಗಣಿಸಿ, ಯುವ ವೇಗಿಗಳಿಗೆ ಅವಕಾಶ ನೀಡಲಾಗಿದೆ," ಎಂದು ಹೇಳಿದ್ದಾರೆ.
"ಏಷ್ಯಾ ಕಪ್ ಟೂರ್ನಿಯ ಬಳಿಕ ಆಸ್ಟ್ರೇಲಿಯಾಗೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಡಲು ಬರುವ ಭಾರತ ತಂಡ, ನಾಲ್ವರು ವೇಗಿಗಳೊಂದಿಗೆ ಬರಬಹುದೆಂದು ಭಾವಿಸುತ್ತೇನೆ. ಇಲ್ಲಿನ ಪರಿಸ್ಥಿತಿಗಳು ಸ್ಪಿನ್‌ಗೆ ಸಹಕಾರಿಯಾಗಿಲ್ಲವಾದರೂ, ಹೆಚ್ಚಿನ ಸ್ಪಿನ್ನರ್‌ಗಳೊಂದಿಗೆ ಇಲ್ಲಿಗೆ ಆಗಮಿಸಲು ಅವರು ಬಯಸುತ್ತಾರೆ," ಎಂದು ರಿಕಿ ಪಾಂಟಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಸ್‌ಪ್ರೀತ್ ಬುಮ್ರಾ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್ ಮುನ್ನಡೆಸಲಿದ್ದಾರೆ. ಭುವಿ ಜೊತೆ ಅರ್ಷದೀಪ್ ಸಿಂಗ್ ಹಾಗೂ ಆವೇಶ್ ಖಾನ್ ಆಯ್ಕೆಯಾಗಿರುವ ಇನ್ನುಳಿದ ವೇಗಿಗಳು. ಅಂದಹಾಗೆ ಮತ್ತೊಬ್ಬ ವೇಗಿ ದೀಪಕ್ ಚಹರ್ ಸ್ಟ್ಯಾಂಡ್ ಬೈನಲ್ಲಿದ್ದಾರೆ.
ಇದರ ಜೊತೆಗೆ ಒಟ್ಟು ನಾಲ್ವರು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಲಾಗಿದೆ. ಆರ್ ಅಶ್ವಿನ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್ ಹಾಗೂ ರವಿ ಬಿಷ್ಣೋಯ್ ತಂಡದಲ್ಲಿದ್ದಾರೆ. ಅಂದಹಾಗೆ ಯುಎಇ ಪರಿಸ್ಥಿತಿಗಳಿಗೆ ತಕ್ಕಂತೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ ಎಂದರೆ ತಪ್ಪಾಗಲಾರದು.
ಮೊಹಮ್ಮದ್ ಶಮಿ 2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚುಟುಕು ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಆದರೆ, ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಓಡಿಐ ಸರಣಿಯಲ್ಲಿ ಭಾರತ ತಂಡದ ಪರ ಮೊಹಮ್ಮದ್ ಶಮಿ ಆಡಿದ್ದರು. ಇದಾದ ಬಳಿಕ ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಪ್ರವಾಸಗಳಿಗೆ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Asia Cup 2022 There Are Better Fast Bowlers Than Mohammed Shami In Indian T20 Cricket Says Ricky Ponting.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm