ಬ್ರೇಕಿಂಗ್ ನ್ಯೂಸ್
12-11-22 12:26 pm Source: Vijayakarnataka ಕ್ರೀಡೆ
ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯುತ್ತಿರುವ 2022ರ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗಳಿಂದ ಸೋತು ಫೈನಲ್ ಸುತ್ತಿನಿಂದ ಭಾರತ ತಂಡ ಹೊರ ಬಿದ್ದಿದೆ. ಇದರ ಹೊರತಾಗಿಯೂ ಉತ್ತಮ ಪ್ರದರ್ಶನ ತೋರಿ ಗಮನ ಸೆಳೆದಿರುವ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರು ಟೂರ್ನಿ ಶ್ರೇಷ್ಠ ಪ್ರಶಸ್ತಿ ಪಡೆಯುವ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ನವೆಂಬರ್ 13 ರಂದು ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿವೆ. ಇದರ ನಡುವೆ ಈ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರ ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಒಬ್ಬರಿಗೆ ಫೈನಲ್ ಪಂದ್ಯದ ಬಳಿಕ ಟೂರ್ನಿ ಶ್ರೇಷ್ಠ ಪ್ರಶಸ್ತಿ ನೀಡಲಾಗುತ್ತದೆ.
ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಂಗ್ಲೆಂಡ್‌ನ ಅಲೆಕ್ಸ್ ಹೇಲ್ಸ್, ಸ್ಯಾಮ್ ಕರನ್, ಜೋಸ್ ಬಟ್ಲರ್, ಪಾಕಿಸ್ತಾನದ ಶಾಹೀನ್ ಶಾ ಅಫ್ರಿದಿ, ಶದಾದ್ ಖಾನ್, ಶ್ರೀಲಂಕಾದ ವಾನಿಂದು ಹಸರಂಗ, ಜಿಂಬಾಬ್ವೆಯ ಸಿಕಂದರ್ ರಾಜಾ ಅವರು ಕೂಡ ಟೂರ್ನಿ ಶ್ರೇಷ್ಠ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ವಿರಾಟ್ ಕೊಹ್ಲಿ: 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿರುವ ವಿರಾಟ್ ಕೊಹ್ಲಿ ಆಡಿದ 6 ಪಂದ್ಯಗಳಲ್ಲಿ 4 ಅರ್ಧಶತಕ ಸೇರಿದಂತೆ 136.40ರ ಸರಾಸರಿಯಲ್ಲಿ 296 ರನ್ ಗಳಿಸಿದ್ದಾರೆ. ಆ ಮೂಲಕ ಇವತ್ತಿನ ಲೆಕ್ಕಾಚಾರದಂತೆ ಈ ಟೂರ್ನಿಯಲ್ಲಿ ಅತಿ ಹಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಅಜೇಯ 82 ರನ್ ಗಳಿಸಿದ್ದು, ಟೀಮ್ ಇಂಡಿಯಾ ಮಾಜಿ ನಾಯಕನ ಈ ಆವೃತ್ತಿಯ ಶ್ರೇಷ್ಠ ಇನಿಂಗ್ಸ್ ಆಗಿದೆ. ಅಂದಹಾಗೆ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ, ಈ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್ ಹೀನಾಯ ಸೋಲು ಅನುಭವಿಸಿತ್ತು. 2014, 2016ರ ಟಿ20 ವಿಶ್ವಕಪ್ ಟೂರ್ನಿಗಳಲ್ಲಿಯೂ ಟೂರ್ನಿ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ವಿರಾಟ್ ಕೊಹ್ಲಿ, ಈ ಬಾರಿಯೂ ಟೂರ್ನಿ ಶ್ರೇಷ್ಠ ಪ್ರಶಸ್ತಿ ಗೆಲ್ಲುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಕೂಡ ವಿರಾಟ್ ಕೊಹ್ಲಿ (1141 ರನ್) ಹೆಸರಿನಲ್ಲಿದೆ. ಒಂದೇ ಋತುವಿನಲ್ಲಿ ಅತಿ ಹೆಚ್ಚು ಅರ್ಧಶತಕ (4) ಗಳಿಸಿದ ಕೀರ್ತಿಗೂ ಕೊಹ್ಲಿ ಭಾಜನರಾಗಿದ್ದಾರೆ. ಇವೆರಡೂ ದಾಖಲೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ ಶ್ರೀಲಂಕಾ ದಿಗ್ಗಜನನ್ನು ಹಿಂದಿಕ್ಕಿದ್ದಾರೆ.
ಸೂರ್ಯಕುಮಾರ್ ಯಾದವ್: ಐಸಿಸಿ ಟಿ20ಐ ಕ್ರಿಕೆಟ್‌ನ ನಂಬರ್ 1 ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಕೂಡ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಟೂರ್ನಿ ಶ್ರೇಷ್ಠ ಪ್ರಶಸ್ತಿ ರೆಸ್‌ನಲ್ಲಿದ್ದಾರೆ. ಕ್ರಿಕೆಟ್ ಲೋಕದಲ್ಲಿ ಇಲ್ಲಿಯವರೆಗೂ ಕಾಣದ ಕೆಲವು ಅದ್ಭುತ ಶಾಟ್ಸ್ ಮೂಲಕ ಗಮನ ಸೆಳೆದಿರುವ ಸೂರ್ಯಕುಮಾರ್ ಯಾದವ್, 6 ಪಂದ್ಯಗಳಿಂದ 189.68 ಸರಾಸರಿಯಲ್ಲಿ 239 ರನ್ ಗಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆ ಹಾಕುವಲ್ಲಿ ಎಡವಿದ್ದ ಮುಂಬೈ ಬ್ಯಾಟರ್, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ ಹಾಗೂ ಜಿಂಬಾಬ್ವೆ ವಿರುದ್ಧ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದಾರೆ.
Team Indias Star Batters Virat Kohli And Suryakumar Yadav Have Been Shortlisted For The Player Of The Tournament In T20 World Cup 2022.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm