ಬ್ರೇಕಿಂಗ್ ನ್ಯೂಸ್
08-06-23 01:48 pm Source: news18 ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಇಂಗ್ಲೆಂಡ್‌ನ ಓವಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುಯುತ್ತಿದೆ. ಇದು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಸೀಸನ್. ಭಾರತ ತಂಡವೂ ಮೊದಲ ಋತುವಿನ ಫೈನಲ್ ತಲುಪಿತ್ತು. ನಂತರ ಅವರು ನ್ಯೂಜಿಲೆಂಡ್ ವಿರುದ್ಧ ಪ್ರಶಸ್ತಿ ಜಯಿಸಿತ್ತು. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಆರಂಭದಲ್ಲಿ ಭಾರತೀಯ ಬೌಲರ್ಗಳು ಪಿಚ್ನ ಲಾಭ ಪಡೆಯುವ ಮೂಲಕ ಆಸೀಸ್ ಬ್ಯಾಟರ್ಗಳ ಮೇಲೆ ದಾಳಿ ನಡೆಸಿದರು.
ಭೋಜನ ವಿರಾಮದ ನಂತರ ಮೊಹಮ್ಮದ್ ಶಮಿ ಮಾರ್ನಸ್ ಲಬುಶೆನ್ ಅವರನ್ನು ಔಟ್ ಮಾಡಿದಾಗ ಆಸ್ಟ್ರೇಲಿಯಾದ ಮೂರನೇ ವಿಕೆಟ್ ಪತನವಾಯಿತು. ಲಬುಶೆನ್ ಬದಲಿಗೆ ಟ್ರಾವಿಸ್ ಹೆಡ್ ಕ್ರೀಸ್‌ಗೆ ಬಂದರು. 76 ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿದ್ದ ಆಸೀಸ್ಗೆ ಸ್ಮಿತ್ ಮತ್ತು ಹೆಡ್ ಉತ್ತಮ ಜೊತೆಯಾಟ ನೀಡಿದರು. ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಟ್ರಾವಿಸ್ ಹೆಡ್ ಭಾರತ ತಂಡದ ಉದ್ದೇಶವನ್ನು ಹಾಳು ಮಾಡಿದರು.
ಟ್ರಾವಿಸ್ ಹೆಡ್ ಅಬ್ಬರದ ಶತಕ ಬಾರಿಸಿದರು. ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು. 29 ವರ್ಷದ ಟ್ರಾವಿಸ್ ಹೆಡ್ ಅವರ ಶತಕದಲ್ಲಿ 15 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿತ್ತು. ಅಂದರೆ, ಅವರ 100 ರನ್‌ಗಳಲ್ಲಿ ಅವರು ಬೌಂಡರಿಯಿಂದ 66 ರನ್ ಗಳಿಸಿದರು. ಶತಕ ಪೂರೈಸಲು ಸುಮಾರು 3 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಬೇಕಾಯಿತು. ಟೆಸ್ಟ್ ಪಂದ್ಯದ ದೃಷ್ಟಿಯಿಂದ ಇದು ಅತ್ಯಂತ ವೇಗದ ಶತಕ. ಟ್ರಾವಿಸ್ ಹೆಡ್ ಅವರ ಈ ಶತಕ ಭಾರತ ತಂಡಕ್ಕೆ ಸಾಕಷ್ಟು ನಷ್ಟವನ್ನು ಉಂಟುಮಾಡಿದೆ.
ಇದರ ನಡುವೆ ಶತಕ ಸಿಡಿಸುವ ಮೂಲಕ ಆಸೀಸ್ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಓವಲ್‌ನಲ್ಲಿ ನಡೆದ WTC ಫೈನಲ್ 2023ರ ಆರಂಭಿಕ ದಿನದ ಮೂರನೇ ಸೆಷನ್‌ನಲ್ಲಿ ಅವರು ಭಾರತದ ವಿರುದ್ಧ ಶತಕ ಸಿಡಿಸಿದರು.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ( C), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (WK), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
Ind vs Aus travis head century against india on icc world test championship final.
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm