ಬ್ರೇಕಿಂಗ್ ನ್ಯೂಸ್
13-06-23 12:13 pm Source: One India Kannada ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಆಡಿದ ನಂತರ ಭಾರತ ತಂಡಕ್ಕೆ ಸುದೀರ್ಘ ಒಂದು ತಿಂಗಳ ಕಾಲ ವಿರಾಮ ಸಿಗಲಿದೆ. ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಶೀಘ್ರದಲ್ಲೇ ತಂಡದ ಆಯ್ಕೆ ಮಾಡಲಾಗುತ್ತದೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರಿಗೆ ಮಣೆ ಹಾಕಲಾಗುತ್ತದೆಯೇ ಕಾದು ನೋಡಬೇಕು.
ಮೊದಲ ಟೆಸ್ಟ್ ಪಂದ್ಯ ಜುಲೈ 12ರಂದು ಡೊಮಿನಿಕಾದಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯ ಜುಲೈ 20ರಂದು ಟ್ರಿನಿಡಾಡ್‌ನಲ್ಲಿ ಶುರುವಾಗಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ಐತಿಹಾಸಿಕ 100ನೇ ಟೆಸ್ಟ್ ಪಂದ್ಯ ಇದಾಗಲಿದೆ.
ಎರಡು ಟೆಸ್ಟ್ ಪಂದ್ಯಗಳ ಸರಣಿಯ ನಂತರ ಮೂರು ಪಂದ್ಯಗಳ ಏಕದಿನ ಸರಣಿಯು ಆರಂಭವಾಗಲಿದ್ದು, ಭಾರತ ತಂಡದ ಪ್ರವಾಸವು ಐದು ಪಂದ್ಯಗಳ ಟಿ20 ಸರಣಿಯೊಂದಿಗೆ ತೆರೆ ಬೀಳಲಿದೆ. ಒಟ್ಟು ಎಂಟು ವೈಟ್-ಬಾಲ್ ಪಂದ್ಯಗಳನ್ನು ಜುಲೈ 27ರಿಂದ ಆಗಸ್ಟ್ 13ರವರೆಗೆ ಆಡಲಾಗುತ್ತದೆ.

IPL Points Table 2023: ಪಾಯಿಂಟ್ ಟೇಬಲ್ ನಲ್ಲಿ ದಿಢೀರ್ ಕುಸಿತ ಕಂಡ ಫಾಫ್ ಪಡೆ
ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರಮವಾಗಿ ಜುಲೈ 27 ಮತ್ತು ಜುಲೈ 29ರಂದು ಮೊದಲ ಎರಡು ಏಕದಿನ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಇನ್ನು ಆಗಸ್ಟ್ 1ರಂದು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯಲಿದೆ. ಆ ಬಳಿಕ ಇಲ್ಲಿಂದಲೇ ಆಗಸ್ಟ್ 3ರಂದು ಮೊದಲ ಟಿ20 ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಆಗಸ್ಟ್ 6 ಮತ್ತು 8ರಂದು ಗಯಾನಾದ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ನಂತರ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿರುವ ಬ್ರೋವರ್ಡ್ ಕೌಂಟಿ ಸ್ಟೇಡಿಯಂನಲ್ಲಿ ಆಗಸ್ಟ್ 12ರಂದು ನಾಲ್ಕನೇ ಮತ್ತು ಆಗಸ್ಟ್ 13ರಂದು ಐದನೇ ಟಿ20 ಪಂದ್ಯಗಳೊಂದಿಗೆ ಭಾರತ ತಂಡದ ಪ್ರವಾಸವು ಮುಕ್ತಾಯಗೊಳ್ಳಲಿದೆ.
![]()
ಈ ಪ್ರವಾಸವು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಹೊಸ 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಚಕ್ರದ ಆರಂಭಿಕ ಸರಣಿಯಾಗಿರಲಿದೆ. ಭಾರತ ತಂಡ ಜೂನ್ 11ರ ಭಾನುವಾರದಂದು ಮುಕ್ತಾಯಗೊಂಡ 2021-23ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡು ಸತತ ಎರಡನೇ ಬಾರಿಗೆ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.
🚨 NEWS 🚨
— BCCI (@BCCI) June 12, 2023
2️⃣ Tests
3️⃣ ODIs
5️⃣ T20Is
Here's the schedule of India's Tour of West Indies 🔽#TeamIndia | #WIvIND pic.twitter.com/U7qwSBzg84
Ind vs WI team Indias west Indies tour schedule announced 2 tests 3 odis and 5 t20s.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm