ಬ್ರೇಕಿಂಗ್ ನ್ಯೂಸ್
08-08-23 02:22 pm Source: News18 Kannada ಕ್ರೀಡೆ
ಇಂದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸತತ 2 ಸೋಲು ಇದೀಗ ಭಾರತಕ್ಕೆ ದೊಡ್ಡ ತಲೆನೋವಾಗಿದೆ. ಇಂದಿನ ಪಂದ್ಯ ಸೋತರೆ ಸರಣಿ ಕೈತಪ್ಪಲಿದೆ. ಇಂದು ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿನ ನಿಧಾನಗತಿಯ ಪಿಚ್‌ಗಳು ಬ್ಯಾಟಿಂಗ್ ಸ್ನೇಹಿಯಾಗಿಲ್ಲ. ಭಾರತ ಕೊನೆಯ ಬಾರಿಗೆ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಸೋತಿತ್ತು. ಇಲ್ಲಿ ನಡೆಯುತ್ತಿರುವ 5 ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತಿರುವ ಭಾರತ 0-2 ಅಂತರದಲ್ಲಿ ಹಿನ್ನಡೆಯಲ್ಲಿದೆ.
ಈ ಮಾದರಿಯಲ್ಲಿ, ಬ್ಯಾಟ್ಸ್‌ಮನ್‌ಗಳು ಮೊದಲ ಎಸೆತದಿಂದಲೇ ಆಕ್ರಮಣಕಾರಿಯಾಗಿ ಆಡಬೇಕು ಆದರೆ ಇದುವರೆಗೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಇಶಾನ್ ಕಿಶನ್, ಶುಭಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಯಾರೂ ಸಹ ಅಬ್ಬರದ ಬ್ಯಾಟಿಂಗ್ ಮಾಡಲಿಲ್ಲ. ಇದು ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅವರಂತಹ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರಿದೆ. ಆದಾಗ್ಯೂ, ತಿಲಕ್ ವರ್ಮಾ ಮಾತ್ರ ಕೊನೆಯ ಎರಡು ಪಂದ್ಯಗಳಲ್ಲಿ ಉತ್ತಮ ಇನ್ನಿಂಗ್ಸ್ ಆಡಿದರು. ಈ ವರ್ಷ ಏಕದಿನ ವಿಶ್ವಕಪ್‌ನತ್ತ ಗಮನಹರಿಸಿದರೆ, ಆಗಸ್ಟ್ 31 ರಂದು ಪ್ರಾರಂಭವಾಗುವ ಏಷ್ಯಾಕಪ್‌ಗೆ ಮೊದಲು ಗಿಲ್, ಇಶಾನ್ ಮತ್ತು ಸೂರ್ಯಕುಮಾರ್ ಕಂಬ್ಯಾಕ್ ಮಾಡಬೇಕಿದೆ.
ಭಾನುವಾರ ಎರಡು ವಿಕೆಟ್‌ಗಳ ಸೋಲಿನ ನಂತರ ಹಾರ್ದಿಕ್, ‘ಬ್ಯಾಟ್ಸ್‌ಮನ್‌ಗಳು ಹೆಚ್ಚು ಜವಾಬ್ದಾರಿಯುತವಾಗಿ ಆಡಬೇಕಾಗುತ್ತದೆ’ ಎಂದು ಹೇಳಿದ್ದು, ಇಂದಿನ ಪಂದ್ಯದಲ್ಲಿ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ. ಇನ್-ಫಾರ್ಮ್ ಸ್ಪಿನ್ನರ್ ಕುಲದೀಪ್ ಯಾದವ್ ಹೆಬ್ಬೆರಳು ಊದಿಕೊಂಡ ಕಾರಣ ಭಾನುವಾರ ನಡೆದ ಪಂದ್ಯದಿಂದ ಹೊರಗುಳಿದಿದ್ದರು ಮತ್ತು ಇಂದು ಅವರು ಫಿಟ್ ಆಗಿದ್ದಾರೆಯೇ ಎಂದು ಕಾದು ನೋಡಬೇಕಾಗಿದೆ.
ಬೌಲರ್‌ಗಳು ವಿಶೇಷವಾಗಿ ಸ್ಪಿನ್ನರ್‌ಗಳು ನಿಕೋಲಸ್ ಪೂರನ್ ಅವರ ಬ್ಯಾಟ್‌ಗೆ ಕಡಿವಾಣ ಹಾಕಬೇಕಾಗುತ್ತದೆ. ಪೂರನ್ ಅವರು ಯುಜ್ವೇಂದ್ರ ಚಹಾಲ್ ಮತ್ತು ರವಿ ಬಿಷ್ಣೋಯ್ ಅವರನ್ನು ಸುಲಭವಾಗಿ ಎದುರಿಸುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಅಕ್ಷರ್ ಗೆ ಬೌಲಿಂಗ್ ಮಾಡಲು ಅವಕಾಶ ನೀಡಿರಲಿಲ್ಲ. ಎರಡು ತಿಂಗಳ ನಂತರ ಆಡಿದ ಚಾಹಲ್ ಪರಿಣಾಮಕಾರಿಯಾದರು ಆದರೆ ಬಿಷ್ಣೋಯ್‌ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವೇಗದ ಬೌಲರ್ ಮುಖೇಶ್ ಕುಮಾರ್ ಸಾಕಷ್ಟು ರನ್ ನೀಡಿದ್ದು, ಅವರ ಸ್ಥಾನದಲ್ಲಿ ಅವೇಶ್ ಖಾನ್ ಅಥವಾ ಉಮ್ರಾನ್ ಮಲಿಕ್ ಅವರನ್ನು ಕಣಕ್ಕಿಳಿಸಬಹುದು.
ಮತ್ತೊಂದೆಡೆ ವೆಸ್ಟ್ ಇಂಡೀಸ್ ಸರಣಿ ಗೆಲ್ಲಲು ಇನ್ನೂ ಒಂದು ಪಂದ್ಯ ಬಾಕಿ ಇದೆ. ಪೂರನ್ ತಮ್ಮ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯವನ್ನು ಸರಿದೂಗಿಸಿದ್ದಾರೆ. ಪೂರನ್ ಮತ್ತು ಶಿಮ್ರಾನ್ ಹೆಟ್ಮೆಯರ್ ಮತ್ತೊಮ್ಮೆ ಭಾರತದ ಸ್ಪಿನ್ನರ್‌ಗಳ ಮೇಲೆ ಒತ್ತಡ ಹೇರಲು ಸಿದ್ಧರಾಗಿದ್ದಾರೆ.
IND vs WI 3rd t20 Team India Playing 11 and Match Prediction.
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm