ಬ್ರೇಕಿಂಗ್ ನ್ಯೂಸ್
09-07-24 09:35 pm HK News Desk ಕ್ರೀಡೆ
ನವದೆಹಲಿ, ಜುಲೈ 9: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಆಯ್ಕೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ರಾತ್ರಿ ತಮ್ಮ ಎಕ್ಸ್ ಖಾತೆಯ ಮೂಲಕ ಘೋಷಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿರುವ ಸ್ಥಾನ ತುಂಬಲಿರುವ ಗೌತಮ್ ಗಂಭೀರ್ ಅವರಿಗೆ ಮೊದಲ ಕ್ರಿಕೆಟ್ ಸರಣಿ ಸದ್ಯದಲ್ಲೇ ಎದುರಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿ. ಇದರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
42 ವರ್ಷದ ಗಂಭೀರ್, ಪ್ರಸಕ್ತ ಐಪಿಎಲ್ ನ ಕೆಕೆಆರ್ ತಂಡದ ಮೆಂಟರ್ ಆಗಿದ್ದು ಈ ಬಾರಿ ಕೆಕೆಆರ್ ತಂಡ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದೆರಡು ವರ್ಷ ಅವರು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದು ಆ ತಂಡ ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು.
ಭಾರತ ತಂಡದ ಪರ ಆಡುತ್ತಿದ್ದ ಸಂದರ್ಭದಲ್ಲಿ ಗೌತಮ್ ಗಂಭೀರ್ 2007ರ ಟಿ 20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ, ಆಗೆಲ್ಲ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Former Cricketer Gautam Gambhir appointed as the new Head Coach of the Indian Men's Cricket Team. Earlier on 1 July, the Board of Control for Cricket in India (BCCI) secretary Jay Shah had confirmed that Team India's new head coach will join the side for the upcoming Sri Lanka series.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm