ಬ್ರೇಕಿಂಗ್ ನ್ಯೂಸ್
28-12-20 04:29 pm Source: MYKHEL ಕ್ರೀಡೆ
ಸಿಡ್ನಿ,ಡಿ.28 : ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಟೆಸ್ಟ್ ಸ್ಪೆಶಾಲಿಷ್ಟ್ ಸ್ಟೀವ್ ಸ್ಮಿತ್‌ಗೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ದಶಕದ ಟೆಸ್ಟ್ ಕ್ರಿಕೆಟರ್ ಗೌರವ ಲಭಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪ ಪ್ರಕರಣದಲ್ಲಿ ಪಾಲ್ಗೊಂಡು ಒಂದು ವರ್ಷದ ನಿಷೇಧ ಶಿಕ್ಷೆ ಅನುಭವಿಸಿರುವ ಸ್ಮಿತ್ ಸದ್ಯ ಮತ್ತೆ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದಾರೆ.
2010ರಿಂದ 2020ರ ವರೆಗೆ 10 ವರ್ಷಗಳಲ್ಲಿ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 65.79ರ ಸರಾಸರಿಯಂತೆ ಒಟ್ಟು 26 ಶತಗಳು, 28 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಐಸಿಸಿ ಪ್ರಶಸ್ತಿಗಳ ವೇಳೆ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 7040 ರನ್‌ಗಳನ್ನು ಕಲೆ ಹಾಕಿದ್ದರು. ಸ್ಮಿತ್ ಅವರನ್ನು ದಶಕದ ಟೆಸ್ಟ್ ಕ್ರಿಕೆಟರ್ ಆಗಿ ಹೆಸರಿಸಿರುವ ಐಸಿಸಿ, ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, 'ವಿಭಿನ್ನ, ಪಟ್ಟು ಹಿಡಿದ, ನಂಬಲಸಾಧ್ಯವಾದ ಸ್ಥಿರ ಪ್ರದರ್ಶನ' ಎಂದು ಹೊಗಳಿದೆ. ಸ್ಮಿತ್ ಸದ್ಯ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಆಡುತ್ತಿದ್ದಾರೆ. ಆದರೆ ಈ ಬಾರಿ ಟೆಸ್ಟ್ ಸರಣಿಯಲ್ಲಿ ಅಂಥ ಗಮನಾರ್ಹ ಪ್ರದರ್ಶನವೇನೂ ನೀಡಿಲ್ಲ.
R74 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಮಿತ್, 62.32ರ ಸರಾಸರಿಯಲ್ಲಿ, 55.19ರ ಸ್ಟ್ರೈಕ್ ರೇಟ್‌ನಂತೆ 7229 ರನ್ ಗಳಿಸಿದ್ದಾರೆ. 26 ಶತಕ, 29 ಅರ್ಧ ಶತಕ, 3 ದ್ವಿಶತಕಗಳನ್ನು ಬಾರಿಸಿದ್ದಾರೆ. ಟೆಸ್ಟ್‌ನಲ್ಲಿ ಸ್ಮಿತ್ ಬಾರಿಸಿರುವ ಅತ್ಯಧಿಕ ವೈಯಕ್ತಿಕ ರನ್ ಅಂದರೆ 239. ಸ್ಮಿತ್‌ಗೀಗ 31ರ ಹರೆಯ.
This News Article is a Copy of MYKHEL
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm