ಬ್ರೇಕಿಂಗ್ ನ್ಯೂಸ್
09-03-26 12:54 pm HK News Staffer ಕ್ರೀಡೆ
ಅಹಮದಾಬಾದ್, ಮಾರ್ಚ್ 9: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಅಮೋಘ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 255 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 159 ರನ್‌ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.
ಈ ಐತಿಹಾಸಿಕ ಗೆಲುವಿನ ಬಳಿಕ ಮಾತನಾಡಿದ ಭಾರತದ ಆಟಗಾರ ಇಶಾನ್ ಕಿಶನ್ ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣವನ್ನು ಹಂಚಿಕೊಂಡಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ರಸ್ತೆ ಅಪಘಾತದಲ್ಲಿ ಇಶಾನ್ ಕಿಶನ್ ಸಹೋದರಿ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮೃತಪಟ್ಟಿದ್ದಾರೆ. ಮಾರ್ಚ್ 7ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ–27ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ತಿಂಗಳ ಹಾಗೂ ಮೂರು ವರ್ಷದ ಇಬ್ಬರು ಪುಟ್ಟ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಟುಂಬದಲ್ಲಿ ಇಂತಹ ದೊಡ್ಡ ದುರಂತ ಸಂಭವಿಸಿದರೂ, ತಂಡದ ಹಿತದೃಷ್ಟಿಯಿಂದ ಇಶಾನ್ ಕಿಶನ್ ಫೈನಲ್ ಪಂದ್ಯವನ್ನು ಆಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಧೈರ್ಯ ತುಂಬಿದ ಕಾರಣ ಅವರು ಮೈದಾನಕ್ಕಿಳಿದಿದ್ದಾರೆ ಎಂದು ತಿಳಿದುಬಂದಿದೆ.
ವೈಯಕ್ತಿಕ ದುಃಖದ ನಡುವೆಯೂ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸೇರಿದ್ದವು. ಜೊತೆಗೆ ಫೀಲ್ಡಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿ ಪ್ರಮುಖ ಕ್ಯಾಚ್‌ಗಳನ್ನು ಹಿಡಿದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.
ಅರ್ಧಶತಕ ಪೂರೈಸಿದ ಬಳಿಕ ಕಿಶನ್ ಬ್ಯಾಟ್ ಅನ್ನು ಆಕಾಶದ ಕಡೆ ತೋರಿಸಿ ತಮ್ಮ ಸಹೋದರಿಯನ್ನು ಸ್ಮರಿಸಿದರು. ಬಳಿಕ ಮಾತನಾಡಿದ ಅವರು, “ಈ ಗೆಲುವನ್ನು ನನ್ನ ಸಹೋದರಿಗೆ ಅರ್ಪಿಸುತ್ತೇನೆ. ನಾನು ವಿಶ್ವಕಪ್ ಗೆಲ್ಲಬೇಕೆಂಬುದು ಅವಳ ಆಸೆಯಾಗಿತ್ತು,” ಎಂದು ಭಾವುಕರಾಗಿ ಹೇಳಿದರು.
ವೈಯಕ್ತಿಕ ದುಃಖದ ನಡುವೆಯೂ ದೇಶಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರ ಧೈರ್ಯ ಹಾಗೂ ಸಮರ್ಪಣೆಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am