ಬ್ರೇಕಿಂಗ್ ನ್ಯೂಸ್
05-01-21 04:59 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತದಿಂದ ಕೊಲ್ಕತ್ತಾದ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸೌರವ್ ಗಂಗೂಲಿ ದಾಖಲಾಗಿರುವ ವುಡ್‌ಲ್ಯಾಂಡ್ಸ್ ಆಸ್ಪತ್ರೆಗೆ ದೇಶದ ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಭೇಟಿ ನೀಡಿ ಸೌರವ್ ಗಂಗೂಲಿಯನ್ನು ಪರೀಕ್ಷಿಸಿದ್ದಾರೆ.
ಆ ಬಳಿಕ ಮಾತನಾಡಿದ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರ ಅವರು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲಿದ್ದು ತಮ್ಮ ನಿವಾಸಕ್ಕೆ ಮರಳಲಿದ್ದಾರೆ ಎಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಮಾಹಿತಿ ನೀಡಿದ್ದಾರೆ.
ಇದೀ ಸಂದರ್ಭದಲ್ಲಿ ವುಡ್‌ಲ್ಯಾಂಡ್ಸ್ ಆಸ್ಪತ್ರೆಯ ಮುಖ್ಯಸ್ಥೆ ಡಾ. ರೂಪಾಲಿ ಬಸು ಬುಧವಾರ ಸೌರವ್ ಗಂಗೂಲಿ ತಮ್ಮ ನಿವಾಸಕ್ಕೆ ಮರಳಲಿದ್ದು ಅದಾದ ಬಳಿಕವೂ ಅವರ ಆರೋಗ್ಯದ ಮೇಲೆ ನಿತ್ಯವೂ ವೈದ್ಯರು ನಿಗಾ ವಹಿಸಲಿದ್ದಾರೆ. ಮುಂದಿನ ಎರಡು ಮೂರು ವಾರಗಳಲ್ಲಿ ಸೌರವ್ ಗಂಗೂಲಿ ಮುಂದಿನ ವೈದ್ಯಕೀಯ ಕ್ರಮಗಳಿಗೆ ಸಿದ್ಧರಾಗಲಿದ್ದಾರೆ ಎಂದಿದ್ದಾರೆ. ಸೋಮವಾರ ಕೇಂದ್ರ ಸಚಿವ ಅನುರಾಗ್ ಠಾಕೂರ್ ವುಡ್‌ಲ್ಯಾಂಡ್ಸ್ ಆಸ್ಪತ್ರೆಗೆ ಭೆಟಿ ನೀಡಿ ಸೌರವ್ ಗಂಗೂಲಿಯವರ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಜ್ಯಸಭಾ ಸದಸ್ಯ ಸ್ವಪ್ನ್ ದಾಸ್ ಗುಪ್ತ, ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಕ್ ಮನ್ನನ್ ಕೂಡ ಆಸ್ಪತ್ರೆಗೆ ಭೆಟಿ ನೀಡಿದ್ದರು.
ಇದಕ್ಕೂ ಮುನ್ನ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೌರವ್ ಗಂಗೂಲಿ ಜೊತೆಗೆ ಮಾತನಾಡಿದ್ದು ಶೀಘ್ರ ಚೇತರಿಕೆಗೆ ಶುಭ ಹಾರೈಸಿದ್ದರು. ಬಳಿಕ ಪತ್ನಿ ಡೋನಾ ಗಂಗೂಲಿ ಜೊತೆಗೂ ಪ್ರಧಾನಿ ಮಾತನಾಡಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ ಮನೆಯ ಜಿಮ್‌ನಲ್ಲಿದ್ದ ಸಂದರ್ಭದಲ್ಲಿ ಸೌರವ್ ಗಂಗೂಲಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಅವರಿಗೆ ಆ್ಯಂಜಿಯೋಪ್ಲಾಸ್ಟಿಯನ್ನು ಕೂಡ ನಡೆಸಲಾಯಿತು.
This News Article is a Copy of MYKHEL
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm