ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್‍ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್‍ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am