ಬ್ರೇಕಿಂಗ್ ನ್ಯೂಸ್
22-01-21 04:16 pm Source: MYKHEL Madhukara Shetty ಕ್ರೀಡೆ
ಅಪ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಗಾಗಿ ಯುಎಇನಲ್ಲಿ ಮೂಖಾಮುಖಿಯಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐರ್ಲೆಂಡ್ ಹಾಘೂ ಅಪ್ಘಾನಿಸ್ತಾನ ತಂಡಗಳು ಮೊದಲ ಏಕದನ ಪಂದ್ಯದಲ್ಲಿ ಮೂಖಾಮುಖಿಯಾಗಿತ್ತು. ಇದರಲ್ಲಿ ಹದಿಹರೆಯದ ಕ್ರಿಕೆಟಿಗ ರಹ್ಮನುಲ್ಲಹ್ ಗರ್ಬಾಜ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ರಹ್ಮನುಲ್ಲಹ್ ಗರ್ಬಾಜ್ ಅದ್ಭುತವಾದ ಶತಕವನ್ನು ಸಿಡಿಸಿ ಅಪಘಾನಿಸ್ತಾನ ಸವಾಲಿನ ಮೊತ್ತವನ್ನು ಪೇರಿಸಲು ಕಾರಣರಾದರು. 127 ಎಸೆತಗಳಲ್ಲಿ 127 ರನ್ ಬಾರಿಸಿದ ಗುರ್ಬಾಜ್ 8 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿದರು. ಈ ಅದ್ಭುತ ಬ್ಯಾಟಿಂಗ್‌ನಿಂದಾಗಿ 16 ರನ್‌ಗಳಿಂದ ಐರ್ಲೆಂಡ್ ವಿರುದ್ಧ ಅಪ್ಘಾನ್ ಗೆದ್ದು ಬೀಗಿದೆ
ಗರ್ಬಾಜ್ ಅವರ ಈ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೆಲ ಪ್ರಮುಖ ದಾಖಲೆಗಳನ್ನು ಮೊದಲ ಪಂದ್ಯದಲ್ಲೇ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ಘಾನಿಸ್ತಾನ ತಂಡದ ಪರವಾಗಿ ಚೊಚ್ಚಲ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಗರ್ಬಾಜ್ ಒಳಗಾಗಿದ್ದಾರೆ. ಸದ್ಯ 19ರ ಹರೆಯದಲ್ಲಿರುವ ಗರ್ಬಾಜ್ ಮತ್ತೊಂದು ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. 2000ನೇ ಇಸವಿಯಿಂದೀಚೆಗೆ ಹಿಟ್ಟಿದ ಆಟಗಾರರ ಪೈಕಿ ಶತಕವನ್ನು ಏಕದಿನ ಕ್ರಿಕೆಟ್‌ನಲ್ಲಿ ಶತಕವನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಅಪರೂಪದ ಹೆಗ್ಗಳಿಕೆಯನ್ನು ಕೂಡ ಗರ್ಬಾಜ್ ತನ್ನದಾಗಿಸಿಕೊಂಡಿದ್ದಾರೆ.
ಈ ಗೆಲುವಿನಿಂದ ಅಪ್ಘಾನಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು 2023ರ ಏಕದಿನ ವಿಶ್ವಕಪ್‌ಗೆ ಅರ್ಹತೆಯನ್ನು ನೀಡಲಿರುವ ವಿಶ್ವಕಪ್ ಸೂಪರ್ ಲೀಗ್‌ನ ಭಾಗವೂ ಆಗಿರುವ ಕಾರಣದಿಂದ ಮುಂದಿನ ಏಕದಿನ ವಿಶ್ವಕಪ್‌ನಲ್ಲಿ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಎರಡೂ ತಂಡಗಳಿಗೆ ಪ್ರಮುಖವಾಗಿದೆ.
This News Article is a Copy of MYKHEL
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm