ಬ್ರೇಕಿಂಗ್ ನ್ಯೂಸ್
13-02-21 03:39 pm Source: MYKHEL Sadashiva ಕ್ರೀಡೆ
ಚೆನ್ನೈ: ಬಿರುಸಿನ ಬ್ಯಾಟಿಂಗ್‌ಗಾಗಿ 'ಹಿಟ್‌ಮ್ಯಾನ್' ಎಂದು ಕರೆಯಲ್ಪಡುವ ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಿಕ್ಸರ್‌ಗಾಗಿಯೇ ದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ರೋಹಿತ್ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ ತವರಿನಲ್ಲಿ ಅಂದರೆ ಭಾರತದಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ 200+ ಸಿಕ್ಸರ್‌ಗಳ ದಾಖಲೆ ನಿರ್ಮಿಸಿದ್ದಾರೆ.
ಭಾರತದಲ್ಲಿ ನಡೆದ ಪಂದ್ಯಗಳಲ್ಲಿ 200+ ಸಿಕ್ಸರ್ ಬಾರಿಸಿದ ಮೊದಲ ಭಾರತೀಯನಾಗಿ ರೋಹಿತ್ ಗುರುತಿಸಿಕೊಂಡಿದ್ದಾರೆ. ಭಾರತದ ಮೊದಲನೇ ಇನ್ನಿಂಗ್ಸ್‌ನ 62ನೇ ಓವರ್ ವೇಳೆಗೆ ರೋಹಿತ್ 16 ಫೋರ್ಸ್, 2 ಸಿಕ್ಸರ್‌ನೊಂದಿಗೆ 138 ರನ್ ಬಾರಿಸಿ ಆಡುತ್ತಿದ್ದರು. ಈ 2 ಸಿಕ್ಸರ್‌ನೊಂದಿಗೆ ದಾಖಲೆ ನಿರ್ಮಾಣವಾಗಿದೆ.
ದ್ವಿತೀಯ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತದಿಂದ ರೋಹಿತ್ ಮತ್ತು ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಉತ್ತಮ ಜೊತೆಯಾಟ ನೀಡಿದ್ದರು. 60 ಓವರ್ ವೇಳೆಗೆ ಇಬ್ಬರಿಂದ 120+ ರನ್ ಜೊತೆಯಾಟ ಬಂದಿತ್ತು. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕ್ ಔಟ್ ಆಗಿ ನಿರ್ಗಮಿಸಿದ್ದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm