ಬ್ರೇಕಿಂಗ್ ನ್ಯೂಸ್
02-03-21 09:45 pm Source: MYKHEL ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕದ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಇತಿಹಾಸದಲ್ಲೇ ಪಡಿಕ್ಕಲ್ ದಾಖಲೆಯ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಕರ್ನಾಟಕ ತಂಡ ಈವರೆಗೆ ಒಟ್ಟು ಐದು ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲೂ ಪಡಿಕ್ಕಲ್ ಉತ್ತಮ ಬ್ಯಾಟಿಂಗ್‌ನೊಂದಿಗೆ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.
ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಗ್ರೂಪ್ 'ಸಿ'ಯಲ್ಲಿರುವ ಕರ್ನಾಟಕ, ಈವರೆಗೆ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಇತ್ತ ದೇವದತ್ ಪಡಿಕ್ಕಲ್ ಅತೀ ಹೆಚ್ಚು ರನ್ ಸರದಾರರ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ.
5 ಪಂದ್ಯಗಳಲ್ಲಿ ಪಡಿಕ್ಕಲ್ ಸ್ಕೋರ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ದೇವದತ್ ಪಡಿಕ್ಕಲ್ ಕಳೆದ ಐದು ಪಂದ್ಯಗಳಲ್ಲೂ 50+ ರನ್ ಗಳಿಸಿದ್ದಾರೆ ಅನ್ನೋದು ವಿಶೇಷ. ಹಿಂದಿನ 5 ಇನ್ನಿಂಗ್ಸ್‌ಗಳಲ್ಲಿ ಪಡಿಕ್ಕಲ್ ಕ್ರಮವಾಗಿ 52, 97, 152, 126, 145 ರನ್ ಗಳಿಸಿದ್ದಾರೆ.
ಅತೀ ಹೆಚ್ಚು ರನ್ ಪಟ್ಟಿಯಲ್ಲಿ ಅಗ್ರ ಸ್ಥಾನ
ವಿಜಯ್ ಹಜಾರೆ 2021 ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಪಡಿಕ್ಕಲ್ ಸದ್ಯ ಮೊದಲನೇ ಸ್ಥಾನದಲ್ಲಿದ್ದಾರೆ. 572 ರನ್ ಗಳಿಸಿರುವ ಪಡಿಕ್ಕಲ್ ಮೊದಲ ಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ತನ್ಮಯ್ ಅಗರ್ವಾಲ್ (446 ರನ್), ತೃತೀಯ ಸ್ಥಾನದಲ್ಲಿ ರವಿಕುಮಾರ್ ಸಮರ್ಥ್ (413), ನಾಲ್ಕನೇ ಸ್ಥಾನದಲ್ಲಿ ಪೃಥ್ವಿ ಶಾ (404), ಐದನೇ ಸ್ಥಾನದಲ್ಲಿ 391 ತಿಲಕ್ ವರ್ಮಾ ಇದ್ದಾರೆ.
3 ಶತಕ, ವಿಶೇಷ ದಾಖಲೆ
ಆಡಿರುವ 5 ಇನ್ನಿಂಗ್ಸ್‌ಗಳಲ್ಲಿ 572 ರನ್ ಕಲೆ ಹಾಕಿರುವ ದೇವದತ್ ಪಡಿಕ್ಕಲ್ 152 ವೈಯಕ್ತಿಕ ಅತ್ಯಧಿಕ ರನ್, 190.66 ರನ್ ಸರಾಸರಿ, 97.78 ಸ್ಟ್ರೈಕ್ ರೇಟ್, 2 ಅರ್ಧ ಶತಕ, 3 ಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ 51 ಫೋರ್ಸ್, 18 ಸಿಕ್ಸರ್‌ಗಳು ಸೇರಿವೆ. ಅಲ್ಲದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ 5 ಬಾರಿ 50+ ರನ್ ಗಳಿಸಿದ ವಿಶೇಷ ದಾಖಲೆಗೂ ಪಡಿಕ್ಕಲ್ ಪಾತ್ರರಾಗಿದ್ದಾರೆ.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm