ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್‌ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm