ಬ್ರೇಕಿಂಗ್ ನ್ಯೂಸ್
15-03-21 11:18 am source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಪರವಾಗಿ ಮೊದಲ ಬಾರಿಗೆ ಕಣಕ್ಕಿಳಿದ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಚೊಚ್ಚಲ ಪಂದ್ಯದಲ್ಲಿ ಅರ್ಧ ಶತಕವನ್ನು ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸ್ಮರಣೀಯ ಪದಾರ್ಪಣೆಯನ್ನು ಮಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಭಾರತದ ಪರವಾಗಿ ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಇಶಾನ್ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರಿಂದ ಉಪಯುಕ್ತ ಸಲಹೆಯನ್ನು ಪಡೆದುಕೊಂಡಿದ್ದರು.
ಪಂದ್ಯದ ಅಂತ್ಯದ ಬಳಿಕ ಇಶಾನ್ ಕಿಶನ್ ಮಾಧ್ಯಗಳೊಂದಿಗೆ ಮಾತನಾಡುತ್ತಾ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. "ಪಂದ್ಯದ ಆರಂಭಕ್ಕೆ ಮುನ್ನ ರೋಹಿತ್ ಭಾಯ್ ನೀನು ಇನ್ನಿಂಗ್ಸ್ ಆರಂಬಿಸಲಿದ್ದೀಯಾ ಎಂದು ತಿಳಿಸಿದರು. ಐಪಿಎಲ್‌ನಲ್ಲಿ ನೀನು ಆಡಿದಂತೆಯೇ ನಿರ್ಭೀತಿಯಿಂದ ಹಾಗೂ ಸ್ಪಷ್ಟವಾಗಿ ಆಡು ಎಂದು ಹೇಳಿದ್ದರು" ಎಂದು ಇಶಾನ್ ಕಿಶನ್ ವಿವರಿಸಿದ್ದಾರೆ.
ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ "ಆದರೆ ರಾಷ್ಟ್ರ ಧ್ವಜವನ್ನು ನೋಡಿದ ನಂತರ ಹಾಗೂ ಟೀಮ್ ಇಂಡಿಯಾ ಜರ್ಸಿಯನ್ನು ತೊಟ್ಟ ನಂತರ ನಾನು ಸ್ವಲ್ಪ ನರ್ವಸ್ ಆದೆ. ಆದರೆ ನಾನು ನನ್ನ ಅತ್ಯುತ್ತಮ ಆಟವನ್ನು ನೀಡಲು ಬಯಸಿದ್ದೆ" ಎಂದು ಇಶಾನ್ ಕಿಶನ್ ಮೊದಲ ಪಂದ್ಯದ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.
ಇಶಾನ್ ಕಿಶನ್ ದೇಶೀಯ ಕ್ರಿಕೆಟ್‌ನಲ್ಲಿ ಹಾಗೂ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ತಂಡದ ಪರವಾಗಿ ಕಣಕ್ಕಿಳಿಯುವ ಇಶಾನ್ ಕಿಶನ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ ಅನುಭವ ಹೊಂದಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇನ್ನು ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಶ್ರಾಂತಿಯನ್ನು ಪಡೆದಿದ್ದರು. ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರೆ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಕೆಎಲ್ ರಾಹುಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ಹೊಣೆಹೊತ್ತಿದ್ದರು.
This News Article Is A Copy Of MYKHEL
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm