ಬ್ರೇಕಿಂಗ್ ನ್ಯೂಸ್
15-03-21 12:53 pm source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದರೆ ಬೌಲಿಂಗ್‌ನಲ್ಲಿ ಎಲ್ಲ ಆಟಗಾರರೂ ಉತ್ತಮ ಪ್ರದರ್ಶನ ನೀಡುವಲ್ಲಿ ಸಫಲವಾದರು. ಹೀಗಾಗಿ ಮೂರನೇ ಪಂದ್ಯಕ್ಕೆ ಭಾರತದ ಆಡುವ ಬಳದಲ್ಲಿ ಬದಲಾವಣೆಯಾಗುತ್ತಾ ಎಂಬುದು ಪ್ರಶ್ನೆಯಾಗಿದೆ.
ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆ ಮಾಡಿ ಕಣಕ್ಕಿಳಿದಿತ್ತು. ಆರಂಭಿಕನಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಿಖರ್ ಧವನ್ ಬದಲಿಗೆ ಇಶಾನ್ ಕಿಶನ್ ಅವಕಾಶವನ್ನು ಪಡೆದುಕೊಂಡರು. ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ದಾಳಿಯಿಂದ ಮಿಂಚಿದ್ದ ಅಕ್ಷರ್ ಪಟೇಲ್ ಎರಡನೇ ಪಂದ್ಯದಿಂದ ಹೊರಗುಳಿದು ಆ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಡಿಲಾಗಿತ್ತು. ಭಾರತ vs ಇಂಗ್ಲೆಂಡ್:
ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಎರಡನೇ ಪಂದ್ಯದಲ್ಲಿ ಭಾರತ ತಂಡದ ಈ ಸಂಯೋಜನೆ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿತ್ತು. ಹೀಗಾಗಿ ಇದರಲ್ಲಿ ಬದಲಾವಣೆ ಮಾಡುವ ಸಂಭವ ತೀರಾ ಕಡಿಮೆಯಿದೆ. ಆದರೆ ಕಳೆದ ಎರಡು ಪಂದ್ಯಗಳಲ್ಲಿಯೂ ಆರಂಭಿಕ ಆಟಗಾರನಾಗಿ ಕೆಎಲ್ ರಾಹುಲ್ ವಿಫಲರಾಗಿದ್ದಾರೆ. ಅವರ ಸ್ಥಾನದ ಬಗ್ಗೆ ಮಾತ್ರ ಅನುಮಾನಗಳಿವೆ. ಆರಂಭಿಕ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿಯನ್ನು ನೀಡಲಾಗಿತ್ತು. ಹೀಗಾಗಿ ಕೆಎಲ್ ರಾಹುಲ್ ರೋಹಿತ್ ಶರ್ಮಾಗೆ ಸ್ಥಾನವನ್ನು ಬಿಟ್ಟುಕೊಡಬೇಕಾಗಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿದೆ.
ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆಗಳು ಕಡಿಮೆಯಿದೆ. ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಭಾರತೀಯ ತಂಡದಲ್ಲಿ ಆಯ್ಕೆಗಾರರು ಹಾಗೂ ನಾಯಕ ವಿರಾಟ್ ಕೊಹ್ಲಿ ಯಾರಿಗೆಲ್ಲಾ ಅವಕಾಶವನ್ನು ನೀಡುತ್ತಿದ್ದಾರೋ ಅವರು ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಹೀಗಾಗಿ ಈ ಆಟಗಾರರನ್ನು ಮುಂದಿನ ಪಂದ್ಯದಿಂದ ಹೊರಗಿಡಲಾಗದ ಪರಿಸ್ಥಿತಿಯಿದೆ. ಎರಡನೇ ಪಂದ್ಯದಲ್ಲಿ ಭಾರತ ಗೆಲುವನ್ನು ಸಾಧಿಸಿದ ಹಿನ್ನೆಲೆಯಲ್ಲಿ ವಿನನಿಂಗ್ ಕಾಂಬಿನೇಶನ್ ಬದಲಾವಣೆ ಕಷ್ಟ.
This News Article Is A Copy Of MYKHEL
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm