ಬ್ರೇಕಿಂಗ್ ನ್ಯೂಸ್
24-04-21 05:56 pm Source: MYKHEL ಕ್ರೀಡೆ
ಏಪ್ರಿಲ್ 24, 'ಗಾರ್ಡ್ ಆಫ್ ಕ್ರಿಕೆಟ್' ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ' ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್‌ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.

ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ 'ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ 'ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್' ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್' ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್‌ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm