ಬ್ರೇಕಿಂಗ್ ನ್ಯೂಸ್
03-05-21 03:30 pm Source: MYKHEL Madhukara Shetty ಕ್ರೀಡೆ
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್‌ರೌಂಡರ್ ತಿಸಾರ ಪೆರೆರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯವನ್ನು ಘೋಷಿಸಿದ್ದಾರೆ. ಈ ಮೂಲಕ ಲಂಕಾ ಕ್ರಿಕೆಟ್ ಪ್ರೇಮಿಗಳಿಗೆ ಪೆರೆರ ಆಘಾತವನ್ನು ನೀಡಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಈ ಅನುಭವಿ ಆಟಗಾರ 32ರ ಹರೆಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯುವ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿ ಮೂಡಿಸಿದೆ.
ಮೂಲಗಳ ಮಾಹಿತಿಯ ಪ್ರಕಾರ ತಿಸಾರ ಪೆರೆರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಶ್ರೀಲಂಕಾದ ಈ ಆಟಗಾರ 2009ರಲ್ಲಿ ಏಕದಿನ ಕ್ರಿಕೆಟ್‌ಗೆ, 2010ರಲ್ಲಿ ಟಿ20 ಹಾಗೂ 2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ್ದಾರೆ.
ಒಟ್ಟು 8 ಟೆಸ್ಟ್ ಪಂದ್ಯಗಳಲ್ಲಿ ಶ್ರಿಲಂಕಾ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರುವ ಪೆರೆರ ಒಂದು ಅರ್ಧ ಶತಕದ ಸಹಿತ 203 ರನ್‌ಗಳಿಸಿದ್ದಾರೆ. 166 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2338 ರನ್ ಹಾಗೂ 175 ವಿಕೆಟ್ ಪಡೆದುಕೊಂಡಿದ್ದರೆ 84 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡಿದ್ದು 1204 ರನ್ ಹಾಗೂ 51 ವಿಕೆಟ್ ಸಂಪಾದಿಸಿದ್ದಾರೆ.
ಐಪಿಎಲ್‌ನಲ್ಲಿಯೂ ಆಡಿದ ಅನುಭವ ಹೊಂದಿರುವ ಪೆರೆರಾ ಈ ಬಾರಿ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆಗೆ ಹೆಸರನ್ನು ನೊಂದಾಯಿಸಿದ್ದರು. 50 ಲಕ್ಷ ಮೂಲ ಬೆಲೆ ಹೊಂದಿದ್ದ ಪೆರೆರ ಅವರನ್ನು ಯಾವುದೇ ಫ್ರಾಂಚೈಸಿ ಕೊಂಡುಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಉಳಿದುಕೊಂಡಿದ್ದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ ಇತ್ತೀಚೆಗೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅನುಭವಿ ಆಟಗಾರರನ್ನು ಪರಿಗಣಿಸದಿರುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದೇ ಕಾರಣದಿಂದಾಗಿ ಪೆರೆರ ತಮ್ಮ ಅಂತಾರಾಷ್ಟ್ರೀಯ ನಿವೃತ್ತಿ ಘೋಷಣೆಯನ್ನು ಹಠಾತ್ ಆಗಿ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm