ಬ್ರೇಕಿಂಗ್ ನ್ಯೂಸ್
27-09-21 01:47 pm Headline Karnataka News Network ಕ್ರೀಡೆ
ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಂದುಕೊಂಡಿದ್ದು ಯಾವುದೂ ಕೂಡ ನಡೆಯುತ್ತಿಲ್ಲ ಎಂದೆನಿಸುತ್ತದೆ. ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗಲೂ ಸಹ ಮುಂಬೈ ಇಂಡಿಯನ್ಸ್ ತಂಡ ಈ ಹಿಂದಿನ ಐಪಿಎಲ್ ಟೂರ್ನಿಗಳಲ್ಲಿ ತೋರಿಸುತ್ತಿದ್ದಂತಹ ಅತ್ಯದ್ಭುತ ಪ್ರದರ್ಶನವನ್ನು ತೋರಿಸುವಲ್ಲಿ ವಿಫಲವಾಗಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಕೊರೋನಾವೈರಸ್ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡ ಸಮಯಕ್ಕೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಳ್ಳಲಷ್ಟೇ ಶಕ್ತವಾಗಿತ್ತು.
ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಂದುಕೊಂಡಿದ್ದು ಯಾವುದೂ ಕೂಡ ನಡೆಯುತ್ತಿಲ್ಲ ಎಂದೆನಿಸುತ್ತದೆ. ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗಲೂ ಸಹ ಮುಂಬೈ ಇಂಡಿಯನ್ಸ್ ತಂಡ ಈ ಹಿಂದಿನ ಐಪಿಎಲ್ ಟೂರ್ನಿಗಳಲ್ಲಿ ತೋರಿಸುತ್ತಿದ್ದಂತಹ ಅತ್ಯದ್ಭುತ ಪ್ರದರ್ಶನವನ್ನು ತೋರಿಸುವಲ್ಲಿ ವಿಫಲವಾಗಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಕೊರೋನಾವೈರಸ್ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡ ಸಮಯಕ್ಕೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಳ್ಳಲಷ್ಟೇ ಶಕ್ತವಾಗಿತ್ತು.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟ್ಸ್‌ಮನ್‌ಗಳು ಕಳಪೆ ಪ್ರದರ್ಶನ ನೀಡುವುದರ ಮೂಲಕ ಕಡಿಮೆ ಮೊತ್ತಗಳಿಗೆ ವಿಕೆಟ್ ಒಪ್ಪಿಸಿ ಸಾಲುಸಾಲಾಗಿ ಪೆವಿಲಿಯನ್ ಪರೇಡ್ ನಡೆಸಿದರು. ಅದರಲ್ಲಿಯೂ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತ ತಂಡದ ಪರ ಸ್ಥಾನವನ್ನು ಪಡೆದುಕೊಂಡಿರುವ ಪ್ರತಿಭಾವಂತ ಆಟಗಾರ ಇಶಾನ್ ಕಿಶನ್ 12 ಎಸೆತಗಳಿಗೆ 9 ರನ್ ಗಳಿಸಿ ಔಟ್ ಆಗಿ ಟೂರ್ನಿಯಲ್ಲಿ ತಮ್ಮ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ. ಹೌದು ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಇಶಾನ್ ಕಿಶಾನ್ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದೇ ರನ್ ಗಳಿಸಲು ಪರದಾಡುತ್ತಿದ್ದಾರೆ.
ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ತಮ್ಮ ಬ್ಯಾಟಿಂಗ್ ಮುಗಿದ ಬಳಿಕ ಇಶಾನ್ ಕಿಶಾನ್ ಕಣ್ಣೀರಿಡುತ್ತಾ ಕುಳಿತಿದ್ದರು. ಹೀಗೆ ದುಃಖದಲ್ಲಿದ್ದ ಇಶಾನ್ ಕಿಶಾನ್ ಬಳಿ ತೆರಳಿದ ವಿರಾಟ್ ಕೊಹ್ಲಿ ಕೆಲಕಾಲ ಆತನ ಜೊತೆ ಮಾತನಾಡುತ್ತಾ ಸಮಾಧಾನ ಮಾಡಿದ್ದಾರೆ. ಹೌದು ಇಶಾನ್ ಕಿಶನ್ ಬಳಿ ತೆರಳಿದ ವಿರಾಟ್ ಕೊಹ್ಲಿ ಆತನ ಜೊತೆ ಮೈದಾನದಲ್ಲಿ ಕೆಲ ದೂರದವರೆಗೆ ಹೆಜ್ಜೆ ಹಾಕುತ್ತಾ ಆತನ ಹೆಗಲ ಮೇಲೆ ಕೈಹಾಕಿ ಸಮಾಧಾನ ಮಾಡಿದ್ದಾರೆ.
ಹೀಗೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ತನ್ನ ಸಹ ಆಟಗಾರನಿಗೆ ಸಮಾಧಾನ ಮಾಡಿರುವ ಪರಿಯನ್ನು ಕಂಡ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿ ಕ್ರೀಡಾಸ್ಫೂರ್ತಿಗೆ ತಲೆಬಾಗಿದ್ದಾರೆ. ತನ್ನ ಅಂತಾರಾಷ್ಟ್ರೀಯ ತಂಡದ ಯುವ ಆಟಗಾರ ಚಿಂತೆಯಲ್ಲಿದ್ದಾಗ ಸಮಯವನ್ನು ಕೊಟ್ಟು ಆತನನ್ನು ಸಮಾಧಾನಪಡಿಸಿದ ಕೊಹ್ಲಿಗೆ ನೆಟ್ಟಿಗರು ಬಹುಪರಾಕ್ ಎಂದಿದ್ದಾರೆ.
ಅಷ್ಟೇ ಅಲ್ಲದೆ ಪಂದ್ಯ ಮುಗಿದ ನಂತರ ಮಂಕಾಗಿ ಕುಳಿತಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬಳಿಯೂ ತೆರಳಿ ವಿರಾಟ್ ಕೊಹ್ಲಿ ಅಲ್ಲಿಯೂ ಕೂಡ ರೋಹಿತ್ ಶರ್ಮಾ ಜತೆ ಸಂತಸದ ಕ್ಷಣಗಳನ್ನು ಕಳೆದಿದ್ದು, ತಮ್ಮಿಬ್ಬರ ನಡುವೆ ಯಾವುದೇ ರೀತಿಯ ಬಿರುಕುಗಳು ಇಲ್ಲ ಎಂಬುದನ್ನು ಬಿಚ್ಚಿಟ್ಟಿದ್ದಾರೆ.
In IPL 2021, Virat Kohli consoles Ishan Kishan who plays for Mumbai Indians.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 09:06 pm
Mangalore Correspondent
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm